೨ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣವನ್ನು ಹೈಕೋರ್ಟ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.
10.12.2024ರಂದು ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆದಿತ್ತು.
ಈ ಘಟನೆಯನ್ನು ವಿಚಾರಣಾ ಆಯೋಗಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು ಎಂದು ಹೇಳಿದ್ದು, ಆಯೋಗವು ಕಾಲಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಪೀಠವು ಆದೇಶಿಸಿದೆ.
