ಮಹಾರಾಷ್ಟ್ರದಿಂದ ಹೃದಯ ವಿದ್ರಾವಕ ಘಟನೆಯೊಂದು ವರದಿಯಾಗಿದೆ.
ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ತನ್ನ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದಾಗ 20 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಪರಂಡದ ಆರ್‌ಜಿ ಶಿಂಧೆ ಕಾಲೇಜಿನ ವಿದ್ಯಾರ್ಥಿನಿ ವರ್ಷಾ ಖರತ್ ಸಂತೋಷದಿಂದ ಬಿಳ್ಕೋಡುಗೆ ಭಾಷಣ ಮಾಡುತ್ತಿದ್ದಳು.
ಭಾಷಣ ಮಾಡುತ್ತಿದ್ದಂತೆ ವರ್ಷಾ ಪ್ರಜ್ಞೆ ತಪ್ಪಿ ಕುಸಿದು ಬೀಳುವ ಕ್ಷಣಗಳು ವಿಡಿಯೋದಲ್ಲಿ ಸೆರೆಯಾಗಿದೆ.
ತಕ್ಷಣ ಆಕೆಯನ್ನು ಆಸ್ಪತ್ರೆಗೆ ಧಾಖಲಿಸಲಾಯಿತು. ಅಷ್ಟರಲ್ಲಿ ಆಕೆಯ ಪ್ರಾಣಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ.
