ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ.
ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ ಎಂದಿದ್ದಾರೆ.
