ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದ ಮೈಸೂರಿನ ಐಶ್ವರ್ಯ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೈಸೂರಿನ ಒಂಟಿಕೊಪ್ಪಲು ಸರ್ಕಾರಿ ಪಿಯು ಕಾಲೇಜಿನಲ್ಲಿ ಐಶ್ವರ್ಯ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಮೈಸೂರಿನ ಕಲಾ ಮಂದಿರ ಅಪಾರ್ಟ್ಮೆಂಟ್ ನಲ್ಲಿನ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಿಕ್ಷಣ ಇಲಾಖೆ ಸಚಿವರು ಫೇಲ್ ಆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದು, ಫೇಲ್ ಆದ ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕಾಗಿದೆ.
ಫೇಲ್ ಆದ ವಿದ್ಯಾರ್ಥಿಗಳು ದೃತಿಗೆಡಬೇಕಾದ ಅಗತ್ಯವಿಲ್ಲ. ಯಾರು ಸಹ ಆತ್ಮಹತ್ಯೆಯಂತಹ ಹಾದಿ ತುಳಿಯಬಾರದು ಅನ್ನೋದು ಕರ್ನಾಟಕ ಫೈಲ್ಸ್ ನ ಕಳಕಳಿಯಾಗಿದೆ.
