ವಿರೋದದ ನಡುವೆಯೂ ಕೇಂದ್ರ ಸರ್ಕಾರ ವಖ್ಫ್ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದ್ದು, ಇದರ ವಿರುದ್ಧ ಧಾರವಾಡದಲ್ಲಿ ಅಂಜುಮನ್ ಸಂಸ್ಥೆ ಬೃಹತ್ ಪ್ರತಿಭಟನೆ ನಡೆಸಿತು.
ಅಂಜುಮನ್ ಕಾಲೇಜಿನಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿತು.
ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಹತ್ತಿಕ್ಕುವ ಸಲುವಾಗಿ ಅಲ್ಲಾಹನ್ ಹೆಸರಲ್ಲಿನ ಆಸ್ತಿ ಕಬಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಅಂಜುಮನ್ ಸಂಸ್ಥೆ, ತಿದ್ದುಪಡಿ ವಿಧೇಯಕವನ್ನು ಹಿಂಪಡೆಯುವಂತೆ ಆಗ್ರಹಿಸಿತು.
