ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಪಾತಕಿ ಬಿಹಾರ ಮೂಲದ ರಿತೇಶ್ ನನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶದವರು ಕೂಲಿ ಕೆಲಸಕ್ಕೆ ಹುಬ್ಬಳ್ಳಿಗೆ ಬಂದಿದ್ದು, ಅದರಲ್ಲಿ ಕೆಲವರು ಗಾಂಜಾ ವ್ಯಸನಿಗಳಾಗಿದ್ದಾರೆ ಎನ್ನುವ ಚರ್ಚೆ ಆರಂಭವಾಗಿದೆ.
ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದವನನ್ನು ಎನ್ ಕೌಂಟರ್ ಮಾಡಿ ಎಂದು ಜನ ಒತ್ತಾಯ ಮಾಡಿದ್ದರು.
ಸಧ್ಯ ಹುಬ್ಬಳ್ಳಿ ಧಾರವಾಡ ಪೊಲೀಸರು ರಿತೇಶ್ ಎಂಬಾತನನ್ನು ಎನ್ ಕೌಂಟರ್ ಮಾಡಿದ್ದಾರೆ. ಖಡಕ್ ಪೊಲೀಸ್ ಕಮಿಷನರ್ ಎಂದೇ ಹೆಸರಾದ ಎನ್ ಶಶಿಕುಮಾರ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಪೊಲೀಸ್ ಕಮಿಷನರ್ ರನ್ನು ಜನ ಅಭಿನಂದಿಸುತ್ತಿದ್ದಾರೆ.
