5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ.
ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ.
ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು.
ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ ಫೈರ್ ಮಾಡಿದ ಪೊಲೀಸರು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ತಂದಿದ್ದರು.
ಆರೋಪಿ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ರಕ್ತಸ್ರಾವವಾಗಿ ಆತ ಮೃತಪಟ್ಟಿದ್ದಾನೆ.
