ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಬಿಐ ತನಿಖೆಗೆ ನೀಡಲು ನಿರಾಕರಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯ ಸಂಬಂಧ ನೋಟಿಸ್ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲೀಕ ದೇವರಾಜುಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಪಟ್ಟಂತೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ ಏ.28ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.
