ಜಾತಿಗಣತಿ ಕುರಿತಾಗಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎದ್ದಿದ್ದು, ಜಾತಿಗಣತಿ ವಿಚಾರವಾಗಿ ಆಡಳಿತ ಪಕ್ಷದಲ್ಲಿ ಇರುಸು ಮುರುಸು ಕಂಡು ಬಂದಿದೆ.
ಇದು ಜಾತಿಗಣತಿ ಅಲ್ಲಾ, ಇದೊಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.
ಇದರಿಂದ ಯಾರಿಗೂ ಅನ್ಯಾಯವಾಗಲು ನಾವು ಅವಕಾಶ ನೀಡಲ್ಲ ಎಂದಿರುವ ಸಿದ್ದರಾಮಯ್ಯ, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತ್ರತ ಚರ್ಚೆ ನಡೆಯಲಿದೆ ಎಂದಿದ್ದಾರೆ.
