ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಇಂದು ನಿಧನರಾದರು.
ಕಳೆದ ಕೆಲವು ದಿನಗಳಿಂದ ಅವರು ಕೆ ಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1999 ರಿಂದ 2013 ರ ವರೆಗೆ ಸತತವಾಗಿ ಮೂರು ಬಾರಿ ನಿಪ್ಪಾಣಿ ಕ್ಷೇತ್ರದ ಶಾಸಕರಾಗಿದ್ದ ಕಾಕಾಸಾಹೇಬ ಪಾಟೀಲ, ಒಳ್ಳೆ ಯ ಹೆಸರು ಮಾಡಿದ್ದರು.
ಕಾಕಾಸಾಹೇಬ ಪಾಟೀಲರ ಅಂತ್ಯಕ್ರಿಯೆ ಇಂದು ಸಂಜೆ ನಿಪ್ಪಾಣಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ, ರಾಜಕೀಯ ಗಣ್ಯರು ಮೃತರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
