Download Our App

Follow us

Home » ರಾಜಕೀಯ » ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು ಇಬ್ಬರು ಸಂದೇಶ ರವಾನಿಸಿದ್ದಾರೆ. 

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಬದಲಾವಣೆ ಆಗಬಹುದು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವರದಿಗಳು ಹರದಾಡುತ್ತಿದ್ದವು. 

“ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ. ಯಾರು ಏನೇ ಹೇಳಿದರೂ ನಮ್ಮ ನಡುವಿನ ಬಾಂಧವ್ಯ ಗಟ್ಟಿಯಾಗಿದೆ” ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯ ಸಮಯದಲ್ಲಿ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಕೈ ಹಿಡಿದು ಮೇಲಕ್ಕೆತ್ತಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಆ ಸಮಯದಲ್ಲಿ ಡಿ.ಕೆ. ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರ ಅಭಿಪ್ರಾಯಕ್ಕೆ ಸಮ್ಮತಿ ಸೂಚಿಸಿ ಮುಗುಳ್ನಕ್ಕರು.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ವಿವಾದದ ನಡುವೆಯೇ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಮಧ್ಯಾಹ್ನ 2 ಗಂಟೆಯಿಂದ ಪಕ್ಷದ ರಾಜ್ಯ ಕಚೇರಿಯಲ್ಲಿ ಸುಮಾರು 100 ಕಾಂಗ್ರೆಸ್ ಶಾಸಕರನ್ನು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ.

ಸುರ್ಜೇವಾಲ ಅವರ ಭೇಟಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಅವರು ಕರ್ನಾಟಕದ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ. ಅವರು ನಮ್ಮ ಶಾಸಕರಿಂದ ಪ್ರತಿಕ್ರಿಯೆ ಪಡೆಯುತ್ತಾರೆ ಮತ್ತು ಅವರಿಗೆ ಯಾವುದೇ ಕುಂದುಕೊರತೆಗಳಿವೆಯೇ ಎಂದು ಸಮಾಲೋಚಿಸುತ್ತಾರೆ. ಇದು ಅವರ ಕೆಲಸ. ಬಿಜೆಪಿ ಸುಳ್ಳುಗಳನ್ನು ಹರಡುವುದರಲ್ಲಿ ನಿಪುಣರು” ಎಂದು ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿರೀಕ್ಷಣಾ ಜಾಮೀನು ಅರ್ಜಿ ವಜಾ. IPS ಅಧಿಕಾರಿ ಶ್ರೀನಾಥ ಜೋಶಿಗೆ ಬಂಧನದ ಭೀತಿ

ಲೋಕಾಯುಕ್ತ ರೇಡ್   ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ

Live Cricket

error: Content is protected !!