Download Our App

Follow us

Home » ಕಾನೂನು » ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ. ಧರ್ಮಸ್ಥಳ ಭಾಗದ ಅಸಹಜ ಸಾವಿನ ತನಿಖೆ

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ. ಧರ್ಮಸ್ಥಳ ಭಾಗದ ಅಸಹಜ ಸಾವಿನ ತನಿಖೆ

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಸಮಗ್ರ ತನಿಖೆಗೆ ಮುಂದಾಗಿದೆ. 

ಹಿರಿಯ ಐ ಪಿ ಎಸ್ ಅಧಿಕಾರಿ, ಪ್ರಣವ ಮೊಹಾಂತಿ ನೇತ್ರತ್ವದಲ್ಲಿ ಎಸ್ ಐ ಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. 

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ. 

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧಂಖರ ರಾಜೀನಾಮೆ

ಆರೋಗ್ಯ ಸಮಸ್ಯೆಗಳು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ್ ಧಂಖರ್ ಸೋಮವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ “ಆರೋಗ್ಯ

Live Cricket

error: Content is protected !!