ವೈಯುಕ್ತಿಕ ಮತ್ತು ಆರ್ಥಿಕ ಒತ್ತಡದಿಂದ ಖೀರಪ್ಪಾ ಎಂಬ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತ ಪಿಎಸ್ಐ ಖೀರಪ್ಪ ಎಂದು ಗುರುತಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದವರು, ನಾಲ್ಕು ತಿಂಗಳ ಹಿಂದೆ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು.
ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
