ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದುಗೆಗಾಗಿ ನಡೆದ ತೆರೆಮರೆಯ ಕಸರತ್ತಿನ ನಡುವೆ ಡಿ ಕೆ ಶಿವಕುಮಾರ ನಡೆ ತೀವ್ರ ಕುತೂಹಲ ಮೂಡಿಸಿದೆ.
ಸಾಮಾಜಿಕ ಜಾಲತಾಣ “ಎಕ್ಸ್ ” ನ ತಮ್ಮ ಖಾತೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ತಾನು ಮೂರು ದಿನ ಯಾರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
“ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
