Download Our App

Follow us

Home » ಭಾರತ » ಮುಡಾ ನಿವೇಶನ / ಸಿ ಎಮ್ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿದ್ದ ಮೇಲ್ಮನವಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಮುಡಾ ನಿವೇಶನ / ಸಿ ಎಮ್ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿದ್ದ ಮೇಲ್ಮನವಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಮುಡಾ ನಿವೇಶನ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ಗೌರವಿಸಿದೆ. ವಿನೀತನಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದರು.

ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ. 

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದವು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ ಎಂದಿರುವ ಅವರು, ”ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಬೇಕು, ಬದಲಿಗೆ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಬಾರದು” ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ತಂದಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ.

ಪತ್ರದ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡರು ಐಟಿ, ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧಂಖರ ರಾಜೀನಾಮೆ

ಆರೋಗ್ಯ ಸಮಸ್ಯೆಗಳು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ್ ಧಂಖರ್ ಸೋಮವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ “ಆರೋಗ್ಯ

Live Cricket

error: Content is protected !!