ಆರೋಗ್ಯ ಸಮಸ್ಯೆಗಳು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ್ ಧಂಖರ್ ಸೋಮವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ “ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು” ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ” ಎಂದು ಧಂಖರ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
