ರಾಜ್ಯ ಕಾಂಗ್ರೇಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಧಾಖಲೆಗಳುಳ್ಳ ಪೆನ್ ಡ್ರೈವ್ ಇದ್ದರೆ ಹೊರಗೆ ಬಿಡಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದರೆ ಸಂತೋಷ ಲಾಡ್, ಪೆನ್ ಡ್ರೈವ್ ನಲ್ಲಿ ಏನಿದೆ ಅನ್ನೋದು ಗೊತ್ತಾಗಲಿ, ಪೆನ್ ಡ್ರೈವ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದರ ಬಗ್ಗೆ ಧಾಖಲೆ ಇದ್ದರೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಲಾಡ್ ತಿಳಿಸಿದರು. ಇತ್ತೀಚಿಗೆ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರ ಬಗ್ಗೆ ಧಾಖಲೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಸರ್ಕಾರದ ಮೇಲೆ ಬಾಂಬ್ ಸಿಡಿಸಿದ್ದರು.
