ಹಳ್ಳಿಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಇನ್ಮೇಲೆ ಹೈಟೆಕ್ ಶಿಕ್ಷಣ ಸಿಗಲಿದೆ. ಅಂತದೊಂದು ಐತಿಹಾಸಿಕ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಹಳ್ಳಿಗಾಡಿನ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆಸಿದ ಸಭೆ ಉತ್ತಮ ನಿರ್ಣಯ ತೆಗೆದುಕೊಂಡಿದೆ. ಸಿ ಎಸ್ ಆರ್ ಹಣ ಬಳಸಿಕೊಂಡು ಸರ್ಕಾರಿ ಶಾಲೆಗಳಿಗೆ ಹೊಸ ಸ್ಪರ್ಷ ನೀಡಲಾಗುವದೆಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತಿಳಿಸಿದರು.
ಬೆಂಗಳೂರಿನಲ್ಲಿ ಸಭೆ ನಡೆಸಿದ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಖಾಸಗಿ ಸಂಘ ಸಂಸ್ಥೆಗಳಿಗೆ ಹಳ್ಳಿಗಳಲ್ಲಿನ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಯೋಜನೆ ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಸಿಗುವ ಶಿಕ್ಷಣ, ಹಳ್ಳಿಯಲ್ಲಿ ಕಲಿಯುವ ಮಕ್ಕಳಿಗೂ ಸಿಗಬೇಕು ಎಂದು ಹೇಳಿದ ಡಿ ಕೆ ಶಿವಕುಮಾರ, ಪ್ರಾರಂಭಿಕ ಹಂತದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದರು.
