ಮುಖ್ಯಮಂತ್ರಿ ಸಿದ್ದರಾಮಯ್ಯ, ಅಸಮಾಧಾನಿತ ಶಾಸಕರ ಜೊತೆ ಜಿಲ್ಲಾವಾರು ಸಭೆ ನಡೆಸುತ್ತಿದ್ದಾರೆ. ಇಂದು ಸಹ ಗದಗ ಜಿಲ್ಲೆಯ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದರು. ಸಭೆಯಲ್ಲಿ ಗದಗ ಶಾಸಕ ಹಾಗೂ ಹಿರಿಯ ಸಚಿವ ಎಚ್ ಕೆ ಪಾಟೀಲ್, ರೋಣ ಶಾಸಕ ಜೆ ಎಸ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಸಲೀಮ್ ಅಹ್ಮದ ಸಭೆಯಲ್ಲಿ ಭಾಗವಹಿಸಿದ್ದರು. ಸರ್ಕಾರದ ಗ್ಯಾರೆಂಟಿ ಯೋಜನೆ, ಲೋಕಸಭಾ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಿದರು. ಕ್ಷೇತ್ರದಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆಯು ಮಾತುಕತೆ ನಡೆಯಿತು.
