ಸುರಕ್ಷಿತ ಮತ್ತು ಅತ್ಯಾಧುನಿಕ ಸಾರಿಗೆಗೆ ಹೆಸರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತೆ ನಾಲ್ಕು ಪ್ರಶಸ್ತಿಗಳು ಬಂದಿವೆ. ವೀ ಕನೆಕ್ಟ್ ಇಂಡಿಯಾ ಮಿಡಿಯಾ ಆಂಡ್ ರಿಸರ್ಚ್ ರವರು ಸ್ಥಾಪಿಸಿರುವ Asia’s best quality ಪ್ರಶಸ್ತಿಯು ನಾಲ್ಕು ವಿಭಾಗಗಳಲ್ಲಿ ಕೆ ಎಸ್ ಆರ್ ಟಿ ಸಿ ಪಾಲಾಗಿದೆ. ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್, ಸಾರಿಗೆ ಸುರಕ್ಷತೆ, ಕಾರ್ಮಿಕ ಸ್ನೇಹಿ ಉಪಕ್ರಮಗಳು ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಒಟ್ಟು ನಾಲ್ಕು ಪ್ರಶಸ್ತಿಗಳು ಒಲಿದು ಬಂದಿವೆ.
ಸೆಪ್ಟೆಂಬರ್ 29 ರಂದು ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ವಿಮಾನ ನಿಲ್ದಾಣದ ಆವರಣದಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.
