5 ಲಕ್ಷ ಪರಿಹಾರಕ್ಕಾಗಿ ರೈತರು ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಮಾಜಿ ಸಚಿವ ಬಿ ಸಿ ಪಾಟೀಲ್ ಗರಂ ಆಗಿದ್ದಾರೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಮಾಡಿದ ಬಿ ಸಿ ಪಾಟೀಲ್, ಸಚಿವ ಶಿವಾನಂದ ಪಾಟೀಲ್, ರೈತ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿಯಲ್ಲಿಯೂ, ಹಿರೇಕೆರೂರ ತಾಲೂಕಿನ ರೈತರು ಸೇರಿ ಒಂದು ಕೋಟಿ ಪರಿಹಾರ ನೀಡುತ್ತೇವೆ, ಸಚಿವ ಶಿವಾನಂದ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ. ಇದೇ ವೇಳೆ ಆಪರೇಷನ್ ಹಸ್ತಕ್ಕೆ ಒಳಗಾಗುತ್ತಿರುವವರು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರಿದರೆ, ಲೋಕಸಭಾ ಚುನಾವಣೆ ನಂತರ ಅವರದ್ದು ನಾಯಿ ಪಾಡು ಆಗುತ್ತದೆ. ಎಚ್ಚರದಿಂದ ಹೆಜ್ಜೆ ಇಡಬೇಕೆಂದು ತಮ್ಮ ಹಳೆಯ ಬಾಂಬೆ ಫ್ರೆಂಡ್ಸ್ ಗೆ ಎಚ್ಚರಿಸಿದರು.
