ಕಾರ್ಮಿಕ ಸಚಿವ ಸಂತೋಷ ಲಾಡ್ ಇಂದು ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಉತ್ಸಾಹಿ ಸಚಿವರಾಗಿರುವ ಸಂತೋಷ ಲಾಡ್, ಸರ್ಕಾರ, ಕಾರ್ಮಿಕರ ಕಲ್ಯಾಣಕ್ಕಾಗಿ ಜಾರಿಗೆ ತಂದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸ ಆಗಬೇಕಿದೆ ಎಂದರು.
ಈ ನಿಟ್ಟಿನಲ್ಲಿ ಅಧಿಕಾರಿಗಳು ಜಾಗ್ರತೆ ವಹಿಸಿ, ಯೋಜನೆ ಅನುಷ್ಟಾನಗೊಳಿಸಬೇಕೆಂದು ಸೂಚಿಸಿದರು. ಕಟ್ಟಡ ಕಾರ್ಮಿಕರು, ಕಾರ್ಮಿಕರ ಮಕ್ಕಳು ಯೋಜನೆ ಇಂದ ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
