ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬಿಜೆಪಿ ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಬಾರದು ಎಂದು ಹೇಳಿ ಅಂಜುಮನ್ ಇಸ್ಲಾಮ್ ಹೈಕೋರ್ಟನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ, ಮೈದಾನ ಪಾಲಿಕೆ ಒಡೆತನದ್ದು, ಹೀಗಾಗಿ ಆ ಮೈದಾನದ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ನಿರ್ಧಾರ ಪಾಲಿಕೆ ಆಯುಕ್ತರಿಗೆ ಇದೆ ಎಂದು ಹೇಳಿ, ಅಂಜುಮನ್ ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
ಹೈಕೋರ್ಟ ಆದೇಶ ಹೊರ ಬೀಳುತ್ತಿದ್ದಂತೆ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆವರಣದಲ್ಲಿ ವಿಜಯೋತ್ಸವ ಆಚರಿಸಿದರು.
ಪಾಲಿಕೆ ಆಯುಕ್ತರ ಮೇಲೆ ಇದೀಗ ಒತ್ತಡ ಹೆಚ್ಚಾಗಿದ್ದು, ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡ್ತಾರಾ ಅಥವಾ ಇಲ್ಲ ಅನ್ನೋದನ್ನು ಕಾದು ನೋಡಬೇಕಿದೆ.