ಕಾಂಗ್ರೇಸ್ಸಿಗೆ ಸಂಪೂರ್ಣ ಬಹುಮತ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರ್ತಾರೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಖಾಸಗಿ ಟಿ ವಿ ಯ ಸಂದರ್ಶನದಲ್ಲಿ ಈ ಮಾತು ಹೇಳಿರುವ ಕೆ ಎನ್ ರಾಜಣ್ಣ, ಸಿದ್ದರಾಮಯ್ಯ ಪರ ಬ್ಯಾಟ್ ಬಿಸಿದ್ದಾರೆ. ರಾಜ್ಯ ಕಾಂಗ್ರೇಸ್ಸಿನಲ್ಲಿ ನಾಯಕರ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿರುವ ಈ ಸಂದರ್ಭದಲ್ಲಿ ರಾಜಣ್ಣ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ. ಇದಕ್ಕೂ ಮುನ್ನ ಕೆ ಎನ್ ರಾಜಣ್ಣ ಮೂವರು ಉಪ ಮುಖ್ಯಮಂತ್ರಿಗಳಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
