Download Our App

Follow us

Home » ಕಾನೂನು » ಸಿದ್ದರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ ಇನ್ಮೇಲೆ ನಿಮ್ಮ ಜಿಲ್ಲೆಯಲ್ಲಿ ಜನತಾ ದರ್ಶನ.

ಸಿದ್ದರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ ಇನ್ಮೇಲೆ ನಿಮ್ಮ ಜಿಲ್ಲೆಯಲ್ಲಿ ಜನತಾ ದರ್ಶನ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಐತಿಹಾಸಿಕ ನಿರ್ಧಾರ ಪ್ರಕಟಿಸಿದ್ದಾರೆ. ಇನ್ಮೇಲೆ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿಯೇ ಜನತಾ ದರ್ಶನ ನಡೆಸಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳು ನಡೆಸುವ ಜನತಾ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನ ಬರುತ್ತಿದ್ದಾರೆ. ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುವವರು ಇನ್ನು ರಾಜಧಾನಿಗೆ ಬರಬೇಕಿಲ್ಲ. ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ನಡೆಸಲಿದ್ದಾರೆ. ಇದೇ ದಿನಾಂಕ 25 -09-2023 ರಂದು ರಾಜ್ಯದಾಧ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ ನಡೆಯಲಿದೆ.

 

ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು 15 ದಿನಗಳಿಗೊಮ್ಮೆ ತಾಲೂಕ ಮಟ್ಟದಲ್ಲಿ ಜನತಾ ದರ್ಶನ ನಡೆಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಜನತಾ ದರ್ಶನದಲ್ಲಿ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕೆಂದು ತಿಳಿಸಿದ್ದಾರೆ.ಜನತಾ ದರ್ಶನ ನಡೆಸುವ ಸ್ಥಳ ಹಾಗೂ ಸಮಯವನ್ನು ಮುಂಚಿತವಾಗಿ ಜನರಿಗೆ ತಿಳಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಜನತಾ ದರ್ಶನದ ಸ್ಥಳ ನಿಗದಿ ಮಾಡುವಾಗ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!