ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದಾನೆ. ಅದ್ದೂರಿಯಾಗಿ ಮೆರವಣಿಗೆಯಲ್ಲಿ ಗಣೇಶನನ್ನು ತಂದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಟಾಪಿಸಿದರು.
ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು.
ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೈದಾನದಲ್ಲಿಯೇ ಪೊಲೀಸ್ ಕಂಟ್ರೊಲ್ ರೂಮ್ ತೆರೆಯಲಾಗಿದೆ.