ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಪಕ್ಷಾಂತರ ಪರ್ವ ಜೋರಾಗಿದೆ. ಏತನ್ಮಧ್ಯೆ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಮತ್ತು ಮೂಡಗೆರೆಯ ಮಾಜಿ ಶಾಸಕ ಎಮ್ ಪಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕಾಂಗ್ರೇಸ್ ಸೇರುವ ನಿರ್ಧಾರವನ್ನು ಪ್ರಕಟಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಈ ಇಬ್ಬರನ್ನು ಕಾಂಗ್ರೇಸಗೆ ಕರೆತರುವಲ್ಲಿ ಯಶಸ್ವಿಯಾಗಿದ್ದು, ಶೆಟ್ಟರ ಸದ್ದಿಲ್ಲದೇ ಬಿಜೆಪಿಯ ಮಾಜಿ ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುತ್ತಿದ್ದಾರೆ.