ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಮತ್ತೆ ಅವಕಾಶ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಹೆಚ್ಚಿನ ಸಮಯ ನೀಡುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಸಮಯವನ್ನು ವಿಸ್ತರಿಸಿದೆ.
# ಈ ಬಾರಿ ಬೆಂಗಳೂರಿನಲ್ಲಿ ತಿದ್ದುಪಡಿ ಮಾಡಲು ಅವಕಾಶ ನೀಡಿಲ್ಲ #
ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
# ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ #
# ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ,
ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ ಮಾಡಿಕೊಳ್ಳಬಹುದಾಗಿದೆ.
# ಸರ್ವರ್ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ,
ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. 9 ದಿನಗಳಲ್ಲಿ ಒಟ್ಟು 60 ರಿಂದ 70 ಸಾವಿರದಷ್ಟು ಅರ್ಜಿಗಳು ಬಂದಿದ್ದವು.
ಆಹಾರ ಇಲಾಖೆ ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದೆ. ಅರ್ಜಿ ಜೊತೆ ನೀಡಿರುವ ದಾಖಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ತಿಳಿಸಿದೆ