ನವಲಗುಂದ, ನರಗುಂದ ಮಾರ್ಗವಾಗಿ ಹೋಗುವ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುದಾನ ಬಿಡುಗಡೆ ಮಾಡಿದೆ. ನವಲಗುಂದ, ನರಗುಂದ ಮಾರ್ಗದಲ್ಲಿ ಬೈಪಾಸ್ ನಿರ್ಮಾಣ ಮಾಡಬೇಕೆಂಬ ದಶಕಗಳ ಕೂಗಿಗೆ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಂಧಿಸಿದ್ದಾರೆ.
ನವಲಗುಂದ ಬೈಪಾಸ್ ರಸ್ತೆ ನಿರ್ಮಾಣ ಮಾಡಲು ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಜೋಶಿಯವರು ಸಲ್ಲಿಸಿದ ಪ್ರಸ್ತಾವನೆಗೆ ಅಸ್ತು ಎಂದಿರುವ ನಿತಿನ್ ಗಡ್ಕರಿ, 126.86 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗುವದು ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ.