ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ಪ್ರವೀಣ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಡಿ ಜೆ ಹಚ್ಚಿ ಕುಣಿಯೋ ಬದಲು, ಇಂಗ್ಲಿಷ್ ಶಾಲೆಯಲ್ಲಿನ ವಿಧ್ಯಾರ್ಥಿಗಳಿಗೆ ಕನ್ನಡ ಓದಿಸಲು ಹುರದುಂಬಿಸಿದರು.
ಪ್ರವೀಣ ಶೆಟ್ಟಿ ಬಣದ ಕರವೇ ಅಧ್ಯಕ್ಷ ಪಾಪು ಧಾರೆ, ಸೆಂಟ್ ಜೋಸೆಫ್ ಶಾಲೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳಿಗೆ 5 ಸಾವಿರ ರೂಪಾಯಿ ಬಹುಮಾನ ನೀಡಿ, ಕನ್ನಡ ಭಾಷೆ ಮೈಗೂಡಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಕುಣಿದು ಕುಪ್ಪಳಿಸುವ ಬದಲು ಕನ್ನಡ ಕಲಿಕೆಗೆ ಒತ್ತು ಕೊಟ್ಟಿದ್ದು ಅರ್ಥಪೂರ್ಣವಾಗಿತ್ತು.