ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ, ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್.ಎಸ್.ಗಣೇಶ್ ಅವರ ಸುಪುತ್ರಿ ಹಾಗೂ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ಸುಪುತ್ರರ ವಿವಾಹ ಕಾರ್ಯಕ್ರಮಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಯ್ತು. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು.
