ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಂಗಲ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಂಸದರೂ ಆದ ಶ್ರೀ ರೇವಂತ್ ರೆಡ್ಡಿ ಅವರ ಪರವಾಗಿ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್ ಅವರ ನೇತೃತ್ವದಲ್ಲಿ ಪ್ರಚಾರ ಮಾಡಲಾಯಿತು.
ಕರ್ನಾಟಕದ ಕಾಂಗ್ರೆಸ್ ಆಡಳಿತವನ್ನು ಇಲ್ಲಿಯ ಜನರು ಮೆಚ್ಚಿಕೊಂಡಿದ್ದು, ತೆಲಂಗಾಣದಲ್ಲೂ ಜನ ಕಾಂಗ್ರೆಸ್ ಆಡಳಿತ ಬಯಸುತ್ತಿದ್ದಾರೆ. ಸದ್ಯ ತೆಲಂಗಾಣದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಪ್ರಸಾದ ಅಬ್ಬಯ್ಯ ಹೇಳಿದರು. ಅಬ್ಬಯ್ಯ ರೊಂದಿಗೆ ಕಾಂಗ್ರೇಸ್ ನಾಯಕ ಮಾಜಿ ಸಿಂಡಿಕೇಟ್ ಸದಸ್ಯ ರವಿ ಮಾಳಗೇರ ಭಾಗವಹಿಸಿದ್ದಾರೆ.
