ಕಳೆದ ವರ್ಷ ಧಾರವಾಡದ ನುಗ್ಗಿಕೇರಿ ಹನುಮಂತ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿ ಅಂಗಡಿ ಮೇಲೆ ನಡೆದ ದಾಳಿ ಮಾಸುವ ಮುನ್ನವೇ ಮತ್ತೆ ಹಿಂದು ಸಂಘಟನೆಗಳು ಕ್ಯಾತೆ ತೆಗೆದಿವೆ.
ನುಗ್ಗಿಕೇರಿ ಹನುಮಂತ ದೇವಸ್ಥಾನದ ಆವರಣದಲ್ಲಿ ಅನ್ಯ ಧರ್ಮಿಯರಾದ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡದಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿದೆ. ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.
ಮುಸ್ಲಿಂರು ಮಾಂಸಾಹಾರ ಸೇವಿಸಿ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಾರೆ ಎಂದು ಆರೋಪಿಸಿದ ಹಿಂದು ಸಂಘಟನೆ ಮುಖಂಡರು, ಹಿಂದು ಧರ್ಮದ ಭಾವನೆಗೆ ಧಕ್ಕೆ ಮಾಡುವ ಮುಸ್ಲಿಂ ವ್ಯಾಪಾರಿಗಳಿಗೆ ಈ ಸಲ ವ್ಯಾಪಾರಕ್ಕೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ.
ಒಂದು ವೇಳೆ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟರೆ ಬೃಹತ್ ಪ್ರತಿಭಟನೆ ಮಾಡುವದಾಗಿ ಎಚ್ಚರಿಸಿದ್ದಾರೆ.
ಕಳೆದ ವರ್ಷ ಹಿಂದು ಸಂಘಟನೆಗಳ ಕಾರ್ಯಕರ್ತರು ಕಲ್ಲಂಗಡಿ ವ್ಯಾಪಾರಿ ನಬಿಸಾಬನ ಅಂಗಡಿ ಮೇಲೆ ದಾಳಿ ಮಾಡಿ ಕಲ್ಲಂಗಡಿ ಒಡೆದು ಹಾಕಿದ್ದರು. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ ಠಾಣೆಯಲ್ಲಿ ದೂರು ಧಾಖಲಾಗಿತ್ತು.