ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಅಗಸ್ಟ್ 4, 2018 ರಂದು ಧಾಖಲಿಸಿದ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಸುಲ್ತಾನಪುರದಲ್ಲಿರುವ ಪ್ರಜಾ ಪ್ರತಿನಿಧಿಗಳ ನ್ಯಾಯಾಲಯ ಜನೇವರಿ 6 ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ರಾಹುಲ್ಸ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಡಿಸೆಂಬರ್ 16 ರಂದು ರಾಹುಲ್ ಗಾಂಧಿಯವರಿಗೆ ನ್ಯಾಯಾಲಯದ ಎದುರು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಭಾರತೀಯ ಜನತಾ ಪಕ್ಷದ ನಾಯಕ ವಿಜಯ ಮಿಶ್ರಾ ಎಂಬುವವರು ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡಿದ್ದರು.