ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ಮಕ್ಕಳನ್ನ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ.
ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನ ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರುರಿಂದ ಪ್ರವಾಸಕ್ಕೆ ಆಗಮಿಸಿದ್ದ ವೇಳೆ ಈ ದುರ್ಘಟನೆ ನಡೆದಿದೆ.