ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು ಎಂದು ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಕಟ್ಟಿ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಇಂದು ನಡೆದ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
