ಪಿಎಸ್ಐ ಆಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ನೀಡಿದ ಮಾಹಿತಿ ಪ್ರಕಾರ ರಾಜ್ಯದ ಘಟಾನುಘಟಿ ರಾಜಕಾರಣಿಗಳಿಗೆ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಅಂದಿನ ಮಾಜಿ ಉಪ ಮುಖ್ಯಮಂತ್ರಿಯಾಗಿದ್ದ ಅಶ್ವಥ್ ನಾರಾಯಣ, ಮಾಜಿ ಶಾಸಕ ಬಸವರಾಜ ದಡೇಸುಗೂರ, ಮತ್ತು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ನೋಟಿಸ್ ಜಾರಿ ಮಾಡಿದೆ. ಇವರು ಹಗರಣಕ್ಕೆ ಸಂಬಂಧಿಸಿದಂತೆ ಗಂಭೀರ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಬುಧವಾರ ಆಯೋಗದ ಮುಂದೆ ಹಾಜರಾಗಿ ಮಾಹಿತಿ ನೀಡುವಂತೆ ನೋಟೀಸ್ ನಲ್ಲಿ ಹೇಳಲಾಗಿದೆ.
ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಕಲಬುರ್ಗಿಯ ಜ್ಞಾನಜ್ಯೋತಿ ಶಾಲೆಯ ಕೇಂದ್ರದಲ್ಲಿ ಆಕ್ರಮ ನಡೆದಿದ್ದರ ಬಗ್ಗೆ ಮಾಹಿತಿ ಸಿಕ್ಕಿತ್ತು. ತದನಂತರ ಈ ಪರೀಕ್ಷಾ ಆಕ್ರಮ ರಾಜಕೀಯ ಸ್ವರೂಪ ಪಡೆದಿತ್ತು.