ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಿಪ್ರಗತಿಯಲ್ಲಿ ನಡೆದಿವೆ. ಬಿಜೆಪಿ ತೆಕ್ಕೆಯಲ್ಲಿರುವ ಧಾರವಾಡ ಲೋಕಸಭಾ ಕ್ಷೇತ್ರವನ್ನು ಹೇಗಾದರು ಮಾಡಿ ವಶಕ್ಕೆ ಪಡೆಯಬೇಕು ಎಂದು ಪಣ ತೊಟ್ಟಿರುವ ಕಾಂಗ್ರೇಸ್ ರಣತಂತ್ರ ಹೆಣೆಯುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ತಕ್ಕ ಮಟ್ಟಿನ ಸಂಘಟನೆ ಹೊಂದಿರುವ ಆಮ್ ಆದ್ಮಿ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂಧಿಸಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಪ್ರವೀಣ ನಡಕಟ್ಟಿ, ಇಂದು ಅಥವಾ ನಾಳೆ ಕಾಂಗ್ರೇಸ್ ಅಭ್ಯರ್ಥಿ ಪರ ಬೆಂಬಲ ಘೋಷಿಸಲಿದ್ದಾರೆ ಎನ್ನಲಾಗಿದೆ.
