ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾವಿಯಲ್ಲಿಂದು ಕಾಂಗ್ರೆಸ್ಸಿನ ಬೃಹತ್ ಶಕ್ತಿ ಪ್ರದರ್ಶನ ನಡೆಯಿತು. ಮೊದಲ ಬಾರಿಗೆ ಶಿಗ್ಗಾವಿಗೆ ಪ್ರಚಾರಕ್ಕೆಂದು ಬಂದಿದ್ದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಶಿಗ್ಗಾವಿಯಲ್ಲಿರುವ ಮಹಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ವಿನೋದ ನಂತರ ವಿವಿಧ ದರ್ಗಾ ಹಾಗೂ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿದರು.
ನಂತರ ನಡೆದ ಬಹಿರಂಗ ಸಭೆಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಂಸದ ಐ ಜಿ ಸನದಿ, ಪಠಾಣ, ಅನಿಲ ಪಾಟೀಲ, ಶಾಕೀರ ಸನದಿ, ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಶಿಗ್ಗಾವಿಯಲ್ಲಿ ಕಾಂಗ್ರೇಸ್ ಅಲೆ ಸೃಷ್ಟಿಯಾಗಿದ್ದು, ಇಲ್ಲಿನ ಮತದಾರರು ಮತ ಹಾಕುವ ಮೂಲಕ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುತ್ತಾರೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.