ಮತದಾನದ ದಿನಾಂಕ ಹತ್ತಿರ ಬರುತ್ತಿದ್ದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್, ಅಬ್ಬರದ ಪ್ರಚಾರ ನಡೆಸಿತು. ಧಾರವಾಡ ತಾಲೂಕಿನ ತಡಕೋಡ ಹಾಗೂ ಹೆಬ್ಬಳ್ಳಿ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿದ ಕಾಂಗ್ರೇಸ್ ಮುಖಂಡರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಶಾಸಕ ವಿನಯ ಕುಲಕರ್ಣಿ ಧರ್ಮಪತ್ನಿ ಶಿವಲೀಲಾ ಕುಲಕರ್ಣಿಯವರ ನೇತೃತ್ವದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಮಾಜಿ ಶಾಸಕ ಅಜಂಪೀರ ಖಾದ್ರಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಅನೀಲಕುಮಾರ ಪಾಟೀಲ, ಧಾರವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ತಡಕೋಡ ಹಾಗೂ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೇಸ್ ಬಹಿರಂಗ ಸಭೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಈ ಸಲ ಕಾಂಗ್ರೇಸ್ ಗೆಲ್ಲಿಸಲು ಪ್ರತಿಜ್ಞೆ ಮಾಡಿದರು.