ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ, ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು ಅವರ ಎಷ್ಟು ಮತಗಳನ್ನು ಪಡೆದರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ 5000 ಮತಗಳನ್ನು ಪಡೆಯುತ್ತಾರೆ. ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿಯನ್ನ ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದರು.