ರಾಜ್ಯ ಬಿಜೆಪಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನಾಯಕತ್ವ ಬದಲಾವಣೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ತಲೆದಂಡಕ್ಕೆ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಟಿಕೇಟ ವಂಚಿತ ನಾಯಕರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ ಎಂದಿರುವ ಸಿದ್ದರಾಮಯ್ಯ, ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಮಹಾಸ್ಪೋಟ ನಡೆಯಲಿದೆ ಎಂದಿದ್ದಾರೆ.