ಹುಬ್ಬಳ್ಳಿ ಧಾರವಾಡ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಬದಲಾವಣೆ ಮಾಡುವಂತೆ ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿದ್ದು, ಅವಳಿನಗರದ ಪೊಲೀಸ್ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದಿರುವ ರಜತ್, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಹೆಣ್ಮಕ್ಕಳು ಭಯದ ವಾತಾವರಣದಲ್ಲಿ ಓಡಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡು ಪೊಕರಿಗಳನ್ನು ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಿ ಕಾನೂನು ಸುವವ್ಯಸ್ತೆ ಕಾಪಾಡಬೇಕು ಎಂದು ರಜತ್ ಉಳ್ಳಾಗಡ್ಡಿಮಠ ಮನವಿ ಮಾಡಿದ್ದಾರೆ.