ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು BJP ಹೈಕಮಾಂಡ್ ದೆಹಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ದೆಹಲಿಗೆ ಕರೆಯಿಸಿಕೊಂಡಿದೆ. ದೆಹಲಿಯ ಏಳು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಪ್ರಾರಂಭಿಸಿರುವ ಶೆಟ್ಟರ್ ಅವರು, ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರ ಮತಸೆಳೆಯಲು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ದೆಹಲಿಯಲ್ಲಿ ಪ್ರಚಾರದ ನಂತರ ಅವರಿಗೆ ಎರಡು ದಿನಗಳ ಕಾಲ ಉತ್ತರ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಗಳ ಪ್ರಚಾರ ನಡೆಸಲು ಪಕ್ಷ ಸೂಚಿಸಿದೆ ಎಂದು ಹೇಳಲಾಗಿದೆ.