ದೆಹಲಿಯ 7 ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕರೆ ಕೊಟ್ಟಿದ್ದ ಬಿಜೆಪಿ ಕಾರ್ಯಾಲಯ ಮುತ್ತಿಗೆ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲರ ಆಮ್ ಆದ್ಮಿ ಹಾಗೂ ಬಿಜೆಪಿ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷ ಇಂದು ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಕರೆ ಕೊಟ್ಟಿತ್ತು. ಬಿಜೆಪಿ ಕಚೇರಿಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಪ್ಯಾರಾ ಮಿಲಿಟರಿ ಪಡೆ ಕಚೇರಿಯನ್ನು ಸುತ್ತುವರೆದಿದೆ.