ಮೈಸೂರಿನಲ್ಲಿ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ” ಲವ್ ” ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ.
ನನಗೂ ಅಂತರ್ಜಾತಿ ವಿವಾಹ ಆಗಬೇಕು ಅನ್ನೋ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಯುವತಿಯನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ, ಆದ್ರೆ ಯುವತಿ ಹಾಗೂ ಆಕೆಯ ಮನೆಯವರು ಒಪ್ಪಲಿಲ್ಲ ಎಂದು ತಮ್ಮ ಹಳೆಯ ನೆನೆಪು ಬಿಚ್ಚಿಟ್ಟರು.
ಅಂಬೇಡ್ಕರ ಹಾಗೂ ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ, ಅಂತರ್ಜಾತಿ ವಿವಾಹಗಳು ಹೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿದ್ದರಾಮಯ್ಯ ಹೇಳಿದರು.