ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ಪ್ರಕಟವಾದ ನಂತರ ಜಿಲ್ಲಾ ಪಂಚಾಯತ ಚುನಾವಣೆ ನಡೆಸುವಾದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ, ಬಿ ಬಿ ಎಮ್ ಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿ ಎಮ್ ತಿಳಿಸಿದ್ದಾರೆ. ಕ್ಷೇತ್ರ ಪುನರವಿಂಗಡಣೆಯಾದ ಬಳಿಕ ಮೀಸಲಾತಿ ಪ್ರಕಟಿಸಲಾಗುವದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.