ಇಂದು ನವದೆಹಲಿಯಲ್ಲಿ ಸಭೆ ನಡೆಸಿದ ಇಂಡಿಯಾ ಒಕ್ಕೂಟದ ಮುಖಂಡರು ಲೋಕಸಭಾ ಚುನಾವಣೆ ಫಲಿತಾಂಶದ ಕುರಿತು ಚರ್ಚೆ ನಡೆಸಿದ್ರು.
ಈ ಸಭೆಯಲ್ಲಿ ಭಾಗವಹಿಸಿದ ಇಂಡಿಯಾ ಒಕ್ಕೂಟದ 26 ಪಕ್ಷಗಳ ಮುಖಂಡರು ತಮ್ಮ ತಮ್ಮ ಪ್ರದೇಶಗಳಲ್ಲಿ ಸೋಲು ಗೆಲುವಿನ ಬಗ್ಗೆ ಮಾಹಿತಿ ಕಲೆ ಹಾಕಿದರು. ಇಂಡಿಯಾ ಒಕ್ಕೂಟಕ್ಕೆ ಎರಡು ರಾಷ್ಟ್ರೀಯ ಹಾಗೂ 24 ಪ್ರಾದೇಶಿಕ ಪಕ್ಷಗಳು ಕೈ ಜೋಡಿಸಿದ್ದು ಅಧಿಕಾರದ ಗದ್ದುಗೆ ಹಿಡಿಯುವ ಭರವಸೆ ವ್ಯಕ್ತಪಡಿಸಿದ್ರು.
ಸಭೆಯ ನಂತರ ಮಾತನಾಡಿದ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಒಕ್ಕೂಟ 295 ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಮಾಜಿ ಮುಖ್ಯಮಂತ್ರಿ ಶರದ ಪವಾರ, ಅಖಿಲೇಶ್ ಯಾದವ, ಉದ್ಭವ ಠಾಕರೆ, ಆರ್ ಜೆ ಡಿ ವರಿಷ್ಟ ತೇಜಸ್ವಿ ಯಾದವ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.