ಈಜಲು ಕೆರೆಗೆ ಇಳಿದ ಯುವಕ ನಾಪತ್ತೆಯಾಗಿರುವ ಘಟನೆ ನವಲಗುಂದ ತಾಲೂಕಿನ ಹಾಳ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ದಾವಲಸಾಬ ಹೆಬಸೂರು ಎಂಬ 24 ವರ್ಷದ ಯುವಕ ಕೆರೆಯಲ್ಲಿ ಈಜಲು ಹೋಗಿದ್ದ.
ಈತ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆತನಿಗಾಗಿ ನಿನ್ನೆ ಸಂಜೆಯಿಂದ ಹುಡುಕಾಟ ನಡೆಸಿರುವ ಅಗ್ನಿಶಾಮಕ ಸಿಬ್ಬಂದಿ ಅಲ್ಲಿಯೇ ಬೀಡು ಬಿಟ್ಟಿದ್ದಾರೆ.
ಕೆರೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಯುವಕರು ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿರುವುದನ್ನು ನೋಡಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಅಗ್ನಿಶಾಮಕದಳ ಭೇಟಿ ನೀಡಿದ್ದು, ಮೃತದೇಹ ಸಿಗದ ಕಾರಣ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮುಕ್ಕಾಂ ಹೂಡಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.