ನಾಳೆ ಲೋಕಸಭಾ ಚುನಾವಣೆಯ ಫಲಿತಾಂಶ ಬರಲಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು, ಕೋಲಾರದ ಕಾಂಗ್ರೇಸ್ ಶಾಸಕ ಕೊತ್ತೂರು ಮಂಜುನಾಥ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತಾನು ಕಾಂಗ್ರೇಸ್ ಶಾಸಕನಾದರು, ಸತ್ಯವನ್ನೇ ಹೇಳಬೇಕು ಎಂದಿರುವ ಶಾಸಕ ಕೊತ್ತೂರು ಮಂಜುನಾಥ, ಕಾಂಗ್ರೇಸ್ ಮುಂದಿನ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ತಯಾರಿ ಈಗಿನಿಂದಲೇ ಶುರುವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ಇರುಸು ಮುರಿಸು ಮಾಡಿದ್ದಾರೆ.